PDO ಪರೀಕ್ಷೆ ಪ್ರವೇಶ ಪತ್ರ ಡೌನ್‌ಲೋಡ್‌ ಅವಧಿ ವಿಸ್ತರಣೆ


ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಹಾಗೂ ಗ್ರಾ.ಪಂ. ಕಾರ್ಯದರ್ಶಿ ಗ್ರೇಡ್‌-1 ಹುದ್ದೆಗಳ ನೇಮಕ ಸಂಬಂಧ ಈ ತಿಂಗಳ 29ರಂದು ನಡೆಸಲಿರುವ ಸ್ಪರ್ಧಾತ್ಮಕ ಪರೀಕ್ಷೆಗೆ ಪ್ರವೇಶಪತ್ರ ಡೌನ್‌ಲೋಡ್‌ ಮಾಡಿಕೊಳ್ಳುವ ಅವಧಿಯನ್ನು ಜ. 25ರವರೆಗೆ ವಿಸ್ತರಿಸಿದೆ. ಅಭ್ಯರ್ಥಿಗಳು ಪ್ರಾಧಿಕಾರದ ವೆಬ್‌ಸೈಟ್‌ನಿಂದ ಪ್ರವೇಶ ಪತ್ರ ಡೌನ್‌ಲೋಡ್‌ ಮಾಡಿಕೊಳ್ಳಬಹುದು. ಈ ಅವಧಿಯನ್ನು ಮತ್ತೆ ವಿಸ್ತರಿಸಲಾಗುವುದಿಲ್ಲ ಎಂದು ಪ್ರಾಧಿಕಾರದ ಪ್ರಕಟಣೆ ತಿಳಿಸಿದೆ. ಪ್ರವೇಶ ಪತ್ರ ಡೌನ್‌ಲೋಡ್‌ ಮಾಡಿಕೊಳ್ಳಲು ತೊಂದರೆಗಳಿದ್ದಲ್ಲಿ ಪ್ರಾಧಿಕಾರವನ್ನು ಸಂಪರ್ಕಿಸಬಹುದು.                                            PDO HALL TICKET CLICK HERE

Share on Google Plus

About Jeevan turadagi

0 ಕಾಮೆಂಟ್‌(ಗಳು):

Post a Comment